ಉದಯಪುರ, ಜೂ 29 (DaijiworldNews/DB): ರಾಜಸ್ಥಾನದ ಉದಯಪುರದಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಕನ್ಹಯ್ಯಾ ಲಾಲ್ ಅವರ ಕುತ್ತಿಗೆಯ ಮೇಲೆ 26 ಗಂಭೀರ ಗಾಯಗಳಾಗಿರುವುದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಹಿರಂಗಗೊಂಡಿದೆ.
ಮರಣೋತ್ತರ ಪರೀಕ್ಷೆ ನಡೆಸುವ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಪರೀಕ್ಷೆ ಪೂರ್ಣಗೊಂಡ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
ಮುಂದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುವ ಸಲುವಾಗಿ ಸದ್ಯ ರಾಜಸ್ಥಾನದಾದ್ಯಂತ ಒಂದು ತಿಂಗಳ ಕಾಲ 144 ಸೆಕ್ಷನ್ ಜಾರಿಗೊಳಿಸಲಾಗಿದೆ.