ನವದೆಹಲಿ, ಜೂ 29 (DaijiworldNews/HR): ಆಗಸ್ಟ್ 6 ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಈ ಕುರಿತು ಚುನಾವಣಾ ಆಯೋಗ ಮಾಹಿತಿ ನೀಡಿದ್ದು, ಉಪರಾಷ್ಟ್ರಪತಿ ಚುನಾವಣೆಗೆ ಜುಲೈ 5 ರಂದು ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದ್ದು, ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜುಲೈ 22 ಕೊನೆಯ ದಿನವಾಗಿದೆ. ಚುನಾವಣೆ ಆಗಸ್ಟ್ 6 ರಂದು ನಡೆಯಲಿದ್ದು, ಅದೇ ದಿನ ಮತಗಳನ್ನು ಎಣಿಸಲಾಗುತ್ತದೆ ಎಂದಿದೆ.
ಇನ್ನು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರ ಸಭೆಯಲ್ಲಿ ಉಪರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಯಿತು ಎಮ್ದು ವರದಿಯಾಗಿದೆ.