ಆಂಧ್ರಪ್ರದೇಶ, ಜೂ 30 (DaijiworldNews/HR): ಆಂಧ್ರದ ಶ್ರೀ ಸತ್ಯಸಾಯಿ ಜಿಲ್ಲೆಯ ತಾಡಿಮರ್ರಿಯಲ್ಲಿ ಕೃಷಿ ಕೆಲಸಕ್ಕೆಂದು ತೆರಳುತ್ತಿದ್ದ ಆಟೋ ಮೇಲೆ ಹೈಟೆನ್ಷನ್ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಐದು ಮಂದಿ ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ನಡೆದಿದೆ.
ಘಟನೆಯಲ್ಲಿ ನಡೆದ ಸ್ಥಳದಲ್ಲೇ ಐವರು ಸಜೀವ ದಹನವಾಗಿದ್ದು, ಆಟೋ ಚಾಲಕ ಪೋತುಲಯ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ಲಕ್ಷ್ಮಿ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಕೂಡಲೇ ಬತ್ತಲಪಲ್ಲಿ ಆರ್ಟಿಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.