ಬೆಂಗಳೂರು, ಜೂ 30 (DaijiworldNews/DB): ಉದಯಪುರದಲ್ಲಿ ಕನ್ಹಯ್ಯಾ ಲಾಲ್ ಅವರ ಶಿರಚ್ಛೇದ ಮಾಡಿರುವುದು ಅಮಾನವೀಯ ಹಾಗೂ ಹೇಯ ಕೃತ್ಯ. ಇದರಲ್ಲಿ ಭಯೋತ್ಪಾದಕ ಚಟುವಟಿಕೆಗಳ ಕೈವಾಡವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನ ಆರ್.ಟಿ. ನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ಕುರಿತು ಸಂಪೂರ್ಣ ತನಿಖೆಯಾಗನೇಕು. ಅಂತಾರಾಷ್ಟ್ರೀಯ ಷಡ್ಯಂತ್ರವು ಈ ಕುಕೃತ್ಯದ ಹಿಂದಿರುವುದು ಸ್ಪಷ್ಟ. ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ರಾಜಸ್ತಾನ ಸರ್ಕಾರವು ಕೊಲೆಗಡುಕರ ವಿರುದ್ದ ಸೂಕ್ತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ಟೈಲರ್ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಯ ಕತ್ತು ಸೀಳಿ ಕೊಲೆ ಮಾಡಿರುವುದು ಆಘಾತಕಾರಿ. ಆರೋಪಿಗಳೊಂದಿಗೆ ಅವರ ಹಿಂದಿರುವ ವಿದೇಶೀ ಕುಖ್ಯಾತ ಸಂಸ್ಥೆಗಳ ಬಗ್ಗೆಯೂ ಸಂಪೂರ್ಣ ತನಿಖೆ ನಡೆಯಬೇಕು ಎಂದವರು ಇದೇ ವೇಳೆ ಒತ್ತಾಯಿಸಿದರು.