ಬೆಂಗಳೂರು, ಜೂ 30 (DaijiworldNews/HR): ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್.ರಕ್ಷಾ ರಾಮಯ್ಯ ಅವರಿಗೆ ಆಂಧ್ರಪ್ರದೇಶದ ಉಸ್ತುವಾರಿ ನೀಡಲಾಗಿದೆ.
ಈ ಕುರಿತು ಮಾತನಾಡಿದ ರಕ್ಷಾ ರಾಮಯ್ಯ, ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಬೇರುಗಳು ಗಟ್ಟಿಯಾಗಿದ್ದು, ಯುವ ಕಾಂಗ್ರೆಸ್ ಮೂಲಕ ಪಕ್ಷವನ್ನು ಮತ್ತಷ್ಟು ಸದೃಢ ಮತ್ತು ಪ್ರಬಲವಾಗಿ ಸಂಘಟಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದಿದ್ದಾರೆ.
ಇನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ನ ಅನೇಕ ಪದಾಧಿಕಾರಿಗಳಿಗೆ ವಿವಿಧ ರಾಜ್ಯಗಳ ಜವಾಬ್ದಾರಿ ನೀಡಲಾಗಿದ್ದು, ರಕ್ಷಾ ರಾಮಯ್ಯಗೆ ಆಂಧ್ರಪ್ರದೇಶದಲ್ಲಿ ಯುವ ಕಾಂಗ್ರೆಸ್ ವ್ಯವಹಾರಗಳನ್ನು ನೋಡಿಕೊಳ್ಳುವ ಉಸ್ತುವಾರಿ ವಹಿಸಲಾಗಿದೆ.