ರಾಜಸ್ಥಾನ, ಜ 01(DaijiworldNews/HR): ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಪುರದ ಇನ್ಸ್ಪೆಕ್ಟರ್ ಜನರಲ್ ಮತ್ತು ಪೊಲೀಸ್ ಸೂಪರಿಂಟೆಂಡೆಂಟ್ ಸೇರಿದಂತೆ 32 ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ಪೋಸ್ಟ್ಗೆ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳು ಉದಯಪದಲ್ಲಿ ಟೈಲರ್ ಅನ್ನು ಹತ್ಯೆ ಮಾಡಿದ್ದರು.
ಇನ್ನು ಟೈಲರ್ ಜೀವ ಬೆದರಿಕೆ ಕುರಿತಂತೆ ಪೊಲೀಸರಿಗೆ ದೂರು ನೀಡಿದರೂ ಭದ್ರತೆ ಒದಗಿಸದ ಹಿನ್ನೆಲೆಯಲ್ಲಿ ಉದಯಪುರ ಪೊಲೀಸರು ಭಾರೀ ಟೀಕೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.
ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣ ಸಂಬಂಧ ರಿಯಾಜ್ ಅಖ್ತರಿ ಮತ್ತು ಘೌಸ್ ಮೊಹಮ್ಮದ್ ಎಂಬುವವರುನ್ನು ಬಂಧಿಸಲಾಗಿದೆ.