ದೆಹಲಿ, ಜ 01(DaijiworldNews/HR): ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಇಡಿ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಲಾಗಿದೆ.
ಈ ಹಿಂದೆ ತನಿಖೆ ನಡೆಸಿದ್ದ ಅಧಿಕಾರಿಗಳು ಆರೋಪಪಟ್ಟಿ ಸಲ್ಲಿದ್ದು, ಆರೋಪ ಪಟ್ಟಿಯನ್ನು ಆಧರಿಸಿ ಡಿ.ಕೆ ಶಿವಕುಮಾರ್ ಸೇರಿ ಐವರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಇನ್ನು ಈ ಸಮನ್ಸ್ ಹಿನ್ನೆಲೆಯಲ್ಲಿ ಡಿಕೆಶಿ ಸೇರಿದಂತೆ ಐವರ ವಿಚಾರಣೆ ನಡೆಯಬೇಕಿತ್ತು. ಆದರೆ ಇಂದು ಕೋರ್ಟ್ ಗೆ ಹಾಜರಾಗಿದ್ದ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ್ದಾರೆ.