ಶ್ರೀರಂಗಪಟ್ಟಣ, ಜ 01(DaijiworldNews/HR): ವಿದ್ಯುತ್ ಕಂಬಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗೌರಿಪುರ ಗ್ರಾಮದ ಬಳಿ ನಡೆದಿದೆ.
ಮೃತರನ್ನು ತಮಿಳುನಾಡು ಮೂಲದ ಎಲುಮಲೈ (60) ಎಂದು ಗುರುತಿಸಲಾಗಿದೆ.
ಬಿಯರ್ ಬಾಟಲಿಗಳನ್ನು ತುಂಬಿದ್ದ ಟ್ರಕ್ ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಟ್ರಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಸ್ಥಳೀಯರು ಬಾಟಲಿಗಳನ್ನು ತೆಗೆದುಕೊಂಡು ಓಡಿ ಹೋಗಿದ್ದಾರೆ.
ಇನ್ನು ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.