ಪಾಟ್ನಾ, ಜ 01(DaijiworldNews/HR): ಪಾಟ್ನಾದ ಸಿವಿಲ್ ನ್ಯಾಯಾಲಯದಲ್ಲಿ ಶುಕ್ರವಾರ ಮಧ್ಯಾಹ್ನ ಸ್ಫೋಟ ಸಂಭವಿಸಿ ಪೊಲೀಸ್ ಸಿಬ್ಬಂದಿಗೆ ಗಾಯಗೊಂಡಿರುವ ಘಟನೆ ನಡೆದಿದೆ.
ಪಾಟ್ನಾದ ಹಾಸ್ಟೆಲ್ನಿಂದ ಕೆಲವು ದಿನಗಳ ಹಿಂದೆ ಬಾಂಬ್ ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಬಾಂಬ್ ಅನ್ನ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಬಾಂಬ್ ಸ್ಫೋಟಗೊಂಡಿದ್ದು, ಅಲ್ಲಿ ಹಾಜರಿದ್ದ ಪ್ರಕರಣದ ತನಿಖೆಯಲ್ಲಿ ತೊಡಗಿದ್ದ ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ.
ಇನ್ನು ಸ್ಫೋಟಗೊಂಡ ಬಾಂಬ್ನ ತೀವ್ರತೆ ತೀರಾ ಕಡಿಮೆಯಿದ್ದು, ಹೆಚ್ಚಿನ ಹಾನಿಯಾಗಿಲ್ಲ ಎಂದು ಹೇಳಲಾಗುತ್ತಿದೆ.
ಸ್ಫೋಟದಿಂದ ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.