ನವದೆಹಲಿ, ಜ 01(DaijiworldNews/HR): ರಾಷ್ಟ್ರಪತಿ ಚುನಾವಣೆಯಲ್ಲಿ ಶಿರೋಮಣಿ ಅಕಾಲಿ ದಳವು ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲವನ್ನ ಘೋಷಿಸಿದೆ.
ಈ ಕುರಿತು ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಬಾದಲ್ ಮಾತನಾಡಿ, 'ನಮ್ಮ ರಾಜಕೀಯ ದೃಷ್ಟಿಕೋನಗಳನ್ನ ಬದಿಗಿಟ್ಟು ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ನಾವು ನಿರ್ಧರಿಸಿದ್ದೇವೆ ಎಂದಿದ್ದಾರೆ.
ಇನ್ನು ಅಧ್ಯಕ್ಷೀಯ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಬೆಂಬಲಿಸಲು ಪಕ್ಷದಲ್ಲಿ ಮೂರು ಗಂಟೆಗಳ ಕಾಲ ಚರ್ಚೆ ನಡೆದಿದ್ದು, ಬಳಿಕ ಎಲ್ಲರೂ ಒಮ್ಮತದಿಂದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.