ಕೋಲ್ಕತ್ತಾ, ಜುಲೈ 01 (DaijiworldNews/SM): ರಾಷ್ಟ್ರಪತಿ ಚುನಾವಣೆ ಮೇಲೆ ಕಣ್ಣಿಟ್ಟಿದ್ದ ಪಶ್ಚಿಮ ಬಂಗಾಳದ ಸಿಎಂ ಮಮತಾ ಅವರು ಸದ್ಯ ಸೈಲೆಂಟ್ ಆಗಿದ್ದಾರೆ. ಪ್ರತಿಪಕ್ಷಗಳ ಅಭ್ಯರ್ಥಿ ಆಯ್ಕೆಯಲ್ಲಿ ಮುಂಚೂಣಿಯಲ್ಲಿದ್ದ ಮಮತಾ ಬ್ಯಾನರ್ಜಿ ಅವರು ಸದ್ಯ ಎಲ್ಲಿಯೂ ಮೂಗು ತುರಿಸುತ್ತಿಲ್ಲ. ಆಡಳಿತಾರೂಢ ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆಯಿರುವುದರಿಂದ ದೀದಿ ಮೌನಕ್ಕೆ ಶರಣಾಗಿದ್ದಾರೆ.
ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿ ಆಯ್ಕೆಗೆ ಕಠಿಣವಾದ ಪ್ರಯತ್ನವನ್ನು ಮಾಡಿದರು ಮತ್ತು ಅಭ್ಯರ್ಥಿಯನ್ನು ಬೆಂಬಲಿಸಲು ಕಾಂಗ್ರೆಸ್ ಸೇರಿದಂತೆ ಹಲವಾರು ಪಕ್ಷಗಳಿಗೆ ಕರೆ ಮಾಡಿ ಸಭೆ ನಡೆಸಿದರು. ಹೆಚ್ಚಿನ ಹುಡುಕಾಟದ ನಂತರ ಅವರು ತಮ್ಮ ಪಕ್ಷದ ತೃಣಮೂಲ ಕಾಂಗ್ರೆಸ್ನ ನಾಯಕ ಯಶವಂತ್ ಸಿನ್ಹಾ ಅವರನ್ನು ಆಯ್ಕೆ ಮಾಡಿದರು. ಆದರೆ ರಾಷ್ಟ್ರಪತಿ ಚುನಾವಣೆ ಸಮೀಪಿಸುತ್ತಿದ್ದಂತೆ ಜುಲೈ 18 ರಂದು ಮತದಾನದ ದಿನದಂದು ಸಂಭವಿಸುವುದನ್ನ ದೀದಿ ಈಗಾಗಲೇ ನೋಡಿದಂತಿದೆ.
ಬಿಜೆಪಿ ಅಭ್ಯರ್ಥಿಯ ಬಗ್ಗೆ ಮೊದಲೇ ತಿಳಿದಿದ್ದರೆ ನಾನು ಯೋಚಿಸುತ್ತಿದ್ದೆ. ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ದ್ರೌಪದಿ ಮುರ್ಮು ಗೆಲ್ಲುವ ಸಾಧ್ಯತೆ ಹೆಚ್ಚು, ವಿಶೇಷವಾಗಿ ಮಹಾರಾಷ್ಟ್ರದಲ್ಲಿ ನಡೆದ ಬೆಳವಣಿಗೆಗಳ ನಂತರ ಮುರ್ಮು ಗೆಲ್ಲಲು ಉತ್ತಮ ಅವಕಾಶಗಳಿವೆ” ಎಂದು ಹೇಳಿದ್ದಾರೆ.