ತಿರುವನಂತಪುರಂ, ಜು 02 (DaijiworldNews/DB): ಕೇರಳದ ಮಾಜಿ ಶಾಸಕ ಪಿ.ಸಿ. ಜಾರ್ಜ್ ಅವರನ್ನು ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ತನ್ನ ಒಡೆತನದಲ್ಲಿರುವ ಗೆಸ್ಟ್ಹೌಸ್ಗೆ ಮಹಿಳೆಯೋರ್ವರನ್ನು ಕಳೆದ ಫೆಬ್ರವರಿಯಲ್ಲಿ ಕರೆಸಿಕೊಂಡಿದ್ದ ಜಾರ್ಜ್ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದರು. ಅಲ್ಲದೇ ನಿರಂತರವಾಗಿ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದರು ಎಂಬುದಾಗಿ ಸಂತ್ರಸ್ತ ಮಹಿಳೆ ಪೊಲೀಸ್ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಇದೀಗ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಜಾರ್ಜ್ ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ, ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರೊಂದಿಗೆ ಸಂಪರ್ಕ ಹೊಂದಿರುವ ಕುರಿತೂ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.