ಕೋಲ್ಕತಾ, ಜೂ 02 (DaijiworldNews/HR): ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ನೂಪುರ್ ಶರ್ಮಾ ಅವರಿಗೆ ಅನೇಕ ಬಾರಿ ಸಮನ್ಸ್ ನೀಡಿದ್ದರೂ ನಮ್ಮ ಅಧಿಕಾರಿಗಳ ಮುಂದೆ ಹಾಜರಾಗದ ಕಾರಣ ಇಂದು ಲುಕ್ಔಟ್ ನೋಟಿಸ್ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ತಿಂಗಳು ನೂಪುರ್ ಶರ್ಮಾ ವಿರುದ್ಧ ಎಫ್ಐಆರ್ಗಳು ದಾಖಲಾದ ನಂತರ ಅಮ್ಹೆರ್ಸ್ಟ್ ಸ್ಟ್ರೀಟ್ ಮತ್ತು ನರ್ಕೆಲ್ದಂಗಾ ಪೊಲೀಸ್ ಠಾಣೆಗಳು ನೂಪುರ್ ಅವ್ರನ್ನ ಪ್ರತ್ಯೇಕವಾಗಿ ವಿಚಾರಣೆಗೆ ಕರೆದಿದ್ದವು ಎಂದು ಅಧಿಕಾರಿ ತಿಳಿಸಿದ್ದಾರೆ.