ಬೆಂಗಳೂರು,ಜೂ 02 (DaijiworldNews/HR): ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ ಸಿನ್ಹಾ ಅವರು ಭಾನುವಾರ ಮತ್ತು ಸೋಮವಾರ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ.
ಯಶವಂತ ಸಿನ್ಹಾ ಅವರು ಸೋಮವಾರದಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕರು ಹಾಗೂ ಸಂಸದರ ಜತೆ ಸಭೆ ನಡೆಸಲಿದ್ದಾರೆ.
ಇನ್ನು ಶನಿವಾರ ಬೆಳಗ್ಗೆ ಹೈದರಾಬಾದ್ಗೆ ಭೇಟಿ ನೀಡಿದ್ದ ಯಶವಂತ ಸಿನ್ಹಾ ಅವರನ್ನು ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಭೇಟಿ ಮಾಡಿದ್ದಾರೆ.
ಯಶವಂತ ಸಿನ್ಹಾ ಅವರು ಸಂಜೆ 4 ಗಂಟೆಗೆ ವಿಶೇಷ ವಿಮಾನ ಮೂಲಕ ದೆಹಲಿಗೆ ಮರಳಲಿದ್ದಾರೆ.