ಬೆಂಗಳೂರು,ಜೂ 02 (DaijiworldNews/HR): ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಗಿಂತ ಜೆಡಿಎಸ್ಗೆ ಹೆಚ್ಚು ಸ್ಥಾನಗಳು ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ 130 ಸೀಟು ಬರುತ್ತದೆ ಎಂಬ ಆಂತರಿಕ ಸಮೀಕ್ಷೆ ಬಗ್ಗೆ ಕೇಳಿದ್ದಕ್ಕೆ, ಅದೊಂದು ಯೋಜಿತ ಸಮೀಕ್ಷೆ, 130 ಸೀಟು ಅನ್ನುವುದೆಲ್ಲ ಸುಳ್ಳು. ಕಾಂಗ್ರೆಸ್ ಪಕ್ಷದ ಶಕ್ತಿ ಇರುವುದೇ 60 ರಿಂದ 65 ಸೀಟು ಎಂದಿದ್ದಾರೆ.
ಇನ್ನು ನಮ್ಮ ಜೆಡಿಎಸ್ ಪಕ್ಷಕ್ಕೆ ಜನತೆಯ ಮತ್ತು ದೇವರ ಆಶೀರ್ವಾದ ಇದೆ. ನಾನು ಚಾಲೆಂಜ್ ಮಾಡುತ್ತೇನೆ. ನಮ್ಮ ಪಕ್ಷ ಈ ಎರಡು ರಾಷ್ಟ್ರಿಯ ಪಕ್ಷಗಳಿಗಿಂತ ಮೇಲಿರುತ್ತದೆಯೇ ಹೊರತು ಕೆಳಗಿರುವುದಿಲ್ಲ ಎಂದು ಹೇಳಿದ್ದಾರೆ.