ಜೈಪುರ, ಜು 03 (DaijiworldNews/HR): ಉದಯಪುರದಲ್ಲಿ ಟೈಲರ್ನ ಭೀಕರ ಹತ್ಯೆಯ ಹಂತಕರಲ್ಲಿ ಒಬ್ಬನ ಸಂಪರ್ಕದ ಆರೋಪವನ್ನು ಬಿಜೆಪಿಯು ನಿರಾಕರಿಸಿದೆ.
ಈ ಕುರಿತು ಮಾತನಾಡಿರುವ ಬಿಜೆಪಿಯ ಅಲ್ಪಸಂಖ್ಯಾತ ವಿಭಾಗದ ಮುಖ್ಯಸ್ಥ ಸಾದಿಕ್ ಖಾನ್ನ, ನಮಗೆ ಮತ್ತು ಆರೋಪಿಗಳಿಗೆ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಕನ್ಹಯ್ಯಾ ಲಾಲ್ನ ಹಂತಕರಲ್ಲಿ ಓರ್ವ ರಿಯಾಜ್ ಅಟ್ಟಾರಿ ಬಿಜೆಪಿಯ ಸದಸ್ಯ ಎಂದು ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಟ್ವೀಟ್ ನಲ್ಲಿ ಆರೋಪಿಸಿದ್ದು, ಇದು ಸುಳ್ಳು ಸುದ್ದಿ ಎಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿದ್ದಾರೆ.