ಬೆಂಗಳೂರು, ಜು 03 (DaijiworldNews/HR): ಕೆಲ ದಿನಗಳ ಹಿಂದೆ ಹೃದಯಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂಮಿ ಕಲಾವಿದ ಗುಬ್ಬಿ ವೀರಣ್ಣನವರ ಪುತ್ರಿ ಸ್ಯಾಂಡಲ್ ವುಡ್ ಹಿರಿಯ ನಟಿ ಹೇಮಲತಾ(70) ಇಂದು ನಿಧನರಾಗಿದ್ದಾರೆ.
ಹೇಮಲತಾ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಸೋಮೇಶ್ವರ ಲೇಔಟ್ ನಲ್ಲಿ ವಾಸಿಸುತ್ತಿದ್ದು, ಅವರ ಅಂತಿಮ ಇಚ್ಛೆಯಂತೆ ಕುಟುಂಬಸ್ಥರು ಅವರ ದೇಹವನ್ನು ಖಾಸಗಿ ಆಸ್ಪತ್ರೆಗೆ ದಾನ ಮಾಡಿದ್ದಾರೆ.
ಇನ್ನು 1966 ರಲ್ಲಿ ಬಿಡುಗಡೆಯಾದ ವರನಟ ಡಾ. ರಾಜಕುಮಾರ್ ಅವರ 'ಎಮ್ಮೆ ತಮ್ಮಣ್ಣ' ಸಿನಿಮಾನ ಸೇರಿದಂತೆ ಅನೇಕ ಸಿನಿಮಾದಲ್ಲಿ ನಟಿಸಿರುವ ಹೇಮಲತಾ ಭರತನಾಟ್ಯ ಕಲಾವಿದೆಯೂ ಆಗಿದ್ದರು.