ಮುಂಬೈ, ಜು 03 (DaijiworldNews/HR): ನೂಪುರ್ ಶರ್ಮಾಗೆ ಬೆಂಬಲ ನೀಡಿರುವ ಮಹಾರಾಷ್ಟ್ರದ ಮೆಡಿಕಲ್ ಶಾಪ್ವೊಂದರ ಮಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಾಸ್ಟರ್ಮೈಂಡ್ ಅನ್ನು ಬಂಧಿಸಿದ್ದಾರೆ.
ಬಂಧಿತನನ್ನು ಇರ್ಫಾನ್ ಖಾನ್ (32) ಎಂದು ಗುರುತಿಸಲಾಗಿದೆ.
ಈ ಪ್ರಕರಣದಲ್ಲಿ ಒಟ್ಟು ಏಳು ಮಂದಿಯ ಬಂಧನವಾಗಿದ್ದು, ಮೆಡಿಕಲ್ ಶಾಪ್ ನಡೆಸುತ್ತಿದ್ದ ಉಮೇಶ್ ಪ್ರಹ್ಲಾದರಾವ್ ಕೊಲ್ಹೆ (54) ಅವರನ್ನು ಕೊಲೆ ಮಾಡಲು ಈತ ಸಂಚು ರೂಪಿಸಿದ್ದ ಎಂದು ನಗರ ಪೊಲೀಸ್ ಆಯುಕ್ತ ಡಾ.ಆರತಿ ಸಿಂಗ್ ಹೇಳಿದ್ದಾರೆ.
ಇದಕ್ಕೂ ಮುನ್ನ ಪೊಲೀಸರು ಮುದಸ್ಸರ್ ಅಹಮದ್ ಅಲಿಯಾಸ್ ಸೋನು ರಜಾ ಶೇಖ್ ಇಬ್ರಾಹಿಂ (22), ಶಾರುಖ್ ಪಠಾಣ್ ಅಲಿಯಾಸ್ ಬಾದಶಾ ಹಿದಾಯತ್ ಖಾನ್ (25), ಅಬ್ದುಲ್ ತೌಫಿಕ್ ಅಲಿಯಾಸ್ ನಾನು ಶೇಖ್ ತಸ್ಲೀಂ (24), ಶೋಬ್ ಖಾನ್ ಅಲಿಯಾಸ್ ಭೂರ್ಯ ಸಬೀರ್ ಖಾನ್ (22), ಅತೀಬ್ ರಶೀದ್ ಆದಿಲ್ ರಶೀದ್ (22) ಮತ್ತು ಯೂಸುಫ್ ಖಾನ್ ಬಹದ್ದೂರ್ ಖಾನ್ (44) ಎಂಬುವವರನ್ನು ಬಂಧಿಸಿದ್ದರು.