ಕೊಪ್ಪಳ, ಜು 03 (DaijiworldNews/DB): ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಲಿಸುತ್ತಿರುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದ ಕಿಡದಾಳ್ ರೈಲ್ವೇ ಗೇಟ್ ಬಳಿ ನಡೆದಿದೆ.
ಬಳ್ಳಾರಿ ಮೂಲದ ತೇಜಶ್ರೀ (22) ಆತ್ಮಹತ್ಯೆಗೈದ ವಿದ್ಯಾರ್ಥಿನಿ. ಹೌಸ್ಮನ್ ಶಿಪ್ನಲ್ಲಿದ್ದ ಈಕೆ ಸುಮಾರು ಮೂರು ತಿಂಗಳಿನಿಂದ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಶನಿವಾರ ಸಂಜೆ ವೇಳೆಗೆ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ. ಗಂಭೀರ ಗಾಯಗೊಂಡಿದ್ದ ಆಕೆಯನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ.
ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821