ಲಕ್ನೋ, ಜು 03 (DaijiworldNews/DB): ಲಕ್ನೋದಲ್ಲಿ ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತ ವಯಸ್ಕ ಸಹೋದರಿಯಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ವಿಶಾಲ್ (22), ಅರುಣ್ (19), ಸುದಿನ್ (23), ಜಿತೇಶ್ (20) ಮತ್ತು ಚಂದ್ರಕಾಂತ್ (20) ಬಂಧಿತ ಆರೋಪಿಗಳು. ಐಪಿಸಿ ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಾಗಿದೆ ಎಂದು ಘೋಸಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ನಾಗೇಶ್ ಉಪಾಧ್ಯಾಯ ತಿಳಿಸಿದ್ದಾರೆ.
ಘೋಸಿ ಪೊಲೀಸ್ ಠಾಣಾ ವ್ಯಾಪ್ತಿಯ ನಡ್ವಾಸರೈ ಪ್ರದೇಶದ ಗ್ರಾಮದಲ್ಲಿ 17 ಮತ್ತು 15 ವರ್ಷ ವಯಸ್ಸಿನ ಇಬ್ಬರು ಸಹೋದರಿಯರ ಮೇಲೆ ಜೂನ್ 30 ಬಹಿರ್ದೆಸೆಗೆ ಹೋಗಿದ್ದಾಗ ಅತ್ಯಾಚಾರ ನಡೆದಿತ್ತು. ಅಲ್ಲದೆ ಯಾರಿಗಾದರೂ ಈ ಬಗ್ಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು ಎಂದು ಬಾಲಕಿಯರ ತಂದೆ ನೀಡಿದ ದೂರಿನಲ್ಲಿ ತಿಳಿಸಿದ್ದರು.