ಬೆಂಗಳೂರು, ಜು 03 (DaijiworldNews/HR): ಜೆಡಿಎಸ್ನ ಮತ್ತೊದು ವಿಕೆಟ್ ಪತನಗೊಂಡಿದ್ದು, ಇಂದು ಮಾಜಿ ಪರಿಷತ್ ಸದಸ್ಯ ಹೆಚ್ ಆರ್ ಶ್ರೀನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗೆ ಕೊಪ್ಪಳದ ಶ್ರೀನಾಥ್ ಸೇರ್ಪಡೆಯಾಗಿದ್ದು, ಅವರನ್ನು ಕಾಂಗ್ರೆಸ್ ಶಾಲು, ಭಾವುಟ ನೀಡಿ ಪಕ್ಷಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬರಮಾಡಿಕೊಂಡಿದ್ದಾರೆ.
ಇನ್ನು ಕಾಂಗ್ರೆಸ್ ಸೇರಿದ ಬಳಿಕ ಮಾತನಾಡಿದಂತ ಹೆಚ್ ಆರ್ ಶ್ರೀನಾಥ್, ನಾನು ಮೂರು ವರ್ಷ ವನವಾಸದಲ್ಲಿ ಇದ್ದೆ. ಇಂದು ಮತ್ತೆ ಪಕ್ಷಕ್ಕೆ ವಾಪಸ್ಸಾಗಿದ್ದೇನೆ. ಡಿ.ಕೆ ಶಿವಕುಮಾರ್, ಬಿ.ಕೆ ಹರಿಪ್ರಸಾದ್ ಮಾರ್ಗದರ್ಶನದಲ್ಲಿ ಪಕ್ಷಕ್ಕೆ ವಾಪಸ್ ಬಂದಿದ್ದೇನೆ ಎಂದರು.