ನವದೆಹಲಿ, ಜು 04 (DaijiworldNews/HR): ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸೋಮವಾರ ಗ್ರೀನ್ ಸಿಗ್ನಲ್ ನೀಡಿದೆ.
ಅಗ್ನಿಪಥ್ ನೇಮಕಾತಿ ಯೋಜನೆಯನ್ನು ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಕೇಂದ್ರ ಸರ್ಕಾರ ಮತ್ತು ಸೇನೆಯ ಸ್ಪಷ್ಟ ಸಂದೇಶದ ನಡುವೆಯೇ ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಅನೇಕ ಮಂದಿ ಮೆಟ್ಟಿಲು ಹತ್ತಿದ್ದರು
ಇದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂಕೋರ್ಟ್ ಮುಂದಿನ ವಾರ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಹೇಳಿದೆ.