ಮುಂಬೈ, ಜು 04 (DaijiworldNews/HR): ಶಿವಸೇನೆ ವಕ್ತಾರ ಸಂಜಯ್ ರಾವತ್ ಅವರಿಗೆ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕೋರ್ಟ್ ಸೋಮವಾರ ವಾರಂಟ್ ಜಾರಿ ಮಾಡಿದೆ.
ಬಿಜೆಪಿಯ ಮಾಜಿ ಸಂಸದ ಕಿರಿತ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ವಿಫಲರಾದ ಹಿನ್ನಲೆಯಲ್ಲಿ ರಾವುತ್ ವಿರುದ್ಧ ಮುಂಬೈನ ನ್ಯಾಯಾಲಯ ಸೋಮವಾರ ಜಾಮೀನು ಪಡೆಯಬಹುದಾದ ವಾರಂಟ್ ಹೊರಡಿಸಿದ್ದು, ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಿದೆ.
ಇನ್ನು ಸೆವ್ರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಕಳೆದ ತಿಂಗಳು ರಾವತ್ ವಿರುದ್ಧ ಸಮನ್ಸ್ ಜಾರಿಗೊಳಿಸಿ, ಜುಲೈ 4 ರಂದು ತನ್ನ ಮುಂದೆ ಹಾಜರಾಗುವಂತೆ ಹೇಳಿತ್ತು. ಆದರೆ ರಾವತ್ ಅವರ ವಕೀಲರು ನ್ಯಾಯಾಲಯಕ್ಕೆ ಹಾಜರಾಗದಿರುವುದರಿಂದ ಇಂದು ವಾರಂಟ್ ಜಾರಿ ಮಾಡಿದೆ.