ಬೆಂಗಳೂರು, ಜು 04 (DaijiworldNews/HR): ಪಿಎಸ್ಐ ನೇಮಕಾತಿ ಪರೀಕ್ಷಾ ವಿಭಾಗದ ಮುಖ್ಯಸ್ಥರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ಇಂದು ವಿಚಾರಣೆ ನಡೆಸಿರುವ ಸಿಐಡಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನ ವಿಚಾರಣೆ ಎದುರಿಸಿದ್ದ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಮೂರನೇ ವಿಚಾರಣೆಗೆ ಗೈರು ಹಾಜರಾಗಿದ್ದು, ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ಶಾಮೀಲಾಗಿರುವುದು ಮೇಲ್ನೋಟಕ್ಕೆ ದೃಢಪಟ್ಟ ಕಾರಣ ಅವರನ್ನು ಇಂದು ಬಂಧಿಸಲಾಗಿದೆ.
ಇನ್ನು ಪಿಎಸ್ಐ ಅಕ್ರಮಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಮತ್ತು ಎಡಿಜಿಪಿ ಹಂತದ ಅಧಿಕಾರಿಯೊಬ್ಬರನ್ನು ಬಂಧಿಸಿರುವುದು ಇದೇ ಮೊದಲು ಎನ್ನಲಾಗಿದೆ.
ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಅಮೃತ್ ಪೌಲ್ ಮಾರ್ಗದರ್ಶನದಲ್ಲಿಯೇ ಅಕ್ರಮ ನಡೆದಿದೆ ಎಂದು ತಿಳಿದು ಬಂದಿದೆ.