ಬೆಂಗಳೂರು, ಜು 04 (DaijiworldNews/SM): ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧನದ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಯಾವುದೇ ತನಿಖೆ ಇದ್ದರೂ ಕಾನೂನಿನ ಪ್ರಕಾರವೇ ನಡೆಯುತ್ತದೆ. ಈ ಮಾತನ್ನು ನಾನು ಆಗಲೇ ಹೇಳುತ್ತಿದ್ದೆ. ಯಾರ ಬಗ್ಗೆಯೂ ಮುಲಾಜಿಲ್ಲ.ಯಾವ ಹಂತದಲ್ಲಿ ಸಾಕ್ಷಿ ಆಧಾರ ಇಟ್ಟುಕೊಂಡು ಕ್ರಮ ತೆಗೆದುಕೊಳ್ಳಬೇಕೋ ಆ ಕೆಲಸವನ್ನು ತನಿಖಾಧಿಕಾರಿಗಳು ಮಾಡುತ್ತಿದ್ದಾರೆ. ವಿಶೇಷವಾಗಿ ಕರ್ನಾಟಕದಲ್ಲಿ ಈ ಕ್ರಮ ಆಗುತ್ತಿದೆ ಎಂದರು.
ಭೂ ವ್ಯಾಜ್ಯಕ್ಕೆ ಸಂಬಂಧಿಸಿ 5 ಲಕ್ಷ ರೂ. ಲಂಚ ಪಡೆದ ಆರೋಪ ಕೇಳಿ ಬಂದ ತಕ್ಷಣ ರಾಜ್ಯ ಸರಕಾರ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ ಮಂಜುನಾಥ್ ಅವರನ್ನು ಮಕ್ಕಳ ಹಕ್ಕುಗಳ ಸಂರಕ್ಷಣೆ ಯೋಜನೆಯ ನಿರ್ದೇಶಕರ ಹುದ್ದೆಗೆ ಎತ್ತಂಗಡಿ ಮಾಡಿತ್ತು.