ನವದೆಹಲಿ, ಜು 05 (DaijiworldNews/DB): ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್ ಅವರ ಮನೆ ಮುಂಭಾಗ ಮುತ್ತಿಗೆ-ಧರಣಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಕಳೆದೆರಡು ತಿಂಗಳ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರ ಮನೆಗೆ ಮುತ್ತಿಗೆ ಹಾಕಿ ಮುಖ್ಯ ಗೇಟ್ನಲ್ಲಿ ಬಿಜೆಪಿ ಯುವ ಮೋರ್ಚಾವು ಪ್ರತಿಭಟನೆ ನಡೆಸಿತ್ತು. ಅಲ್ಲದೆ, ಈ ಸಂದರ್ಭದಲ್ಲಿ ಸಿಎಂ ಮನೆಯ ಗೇಟ್ಗೆ ಹಾನಿ ಮಾಡಲಾಗಿತ್ತು ಎಂಬ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ತೇಜಸ್ವಿ ಸೂರ್ಯ ಸಹಿತ ಯುವ ಮೋರ್ಚಾದ ಎಂಟು ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ಇದೀಗ ತೇಜಸ್ವಿ ಸೂರ್ಯ ಅವರನ್ನು ಘಟನೆ ನಡೆದು ಎರಡು ತಿಂಗಳ ಬಳಿಕ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ಕಳೆದ ವಾರವೂ ಅವರನ್ನು ಎರಡು ತಾಸು ಕಾಲ ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ಸಿ.ಆರ್.ಪಿ.ಸಿ. ಸೆಕ್ಷನ್ 41 ಎ ಅಡಿಯಲ್ಲಿ ತೇಜಸ್ವಿ ಸೂರ್ಯ ಅವರಿಗೆ ನೊಟೀಸ್ ಕಳುಹಿಸಲಾಗಿದೆ.