ಸಂಭಾಲ್, ಜು 05 (DaijiworldNews/HR): ಉತ್ತರ ಪ್ರದೇಶದ ಸಂಭಾಲ್ನಲ್ಲಿ ಹಿಂದೂ ದೇವತೆಗಳ ಚಿತ್ರವಿರುವ ಕಾಗದದ ಮೇಲೆ ಕೋಳಿ ಮಾಂಸವನ್ನು ಮಾರಾಟ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ತಾಲಿಬ್ ಹುಸೇನ್ ಎಂದು ಗುರುತಿಸಲಾಗಿದೆ.
ಈತ ತನ್ನ ಅಂಗಡಿಯಲ್ಲಿ ಕೋಳಿ ಮಾಂಸವನ್ನು ಹಿಂದೂ ದೇವರುಗಳ ಚಿತ್ರವಿರುವ ಕಾಗದದ ಮೇಲೆ ಮಾರಾಟ ಮಾಡುತ್ತಿದ್ದಾನೆ ಎಂದು ಸ್ಥಳೀಯರು ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ತಾಲಿಬ್ ಹುಸೇನ್ನನ್ನು ಬಂಧಿಸಲು ಅವರ ಅಂಗಡಿಗೆ ತೆರಳಿದ್ದ ವೇಳೆ ಆತ ಪೊಲೀಸ್ ತಂಡದ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ.
ತಾಲಿಬ್ ಹುಸೇನ್ ವಿರುದ್ಧ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.