ನವದೆಹಲಿ, ಜು 05(DaijiworldNews/MS): ದೆಹಲಿಯಿಂದ ದುಬೈಗೆ ಹೊರಟಿದ್ದ ಸ್ಪೈಸ್ಜೆಟ್ ವಿಮಾನವೂ ಮಂಗಳವಾರ ಪಾಕಿಸ್ತಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಸ್ಪೈಸ್ಜೆಟ್ SG-11 ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನಲೆಯಲ್ಲಿ ಕರಾಚಿಯಲ್ಲಿ ತುರ್ತುಭೂಸ್ಪರ್ಶ ಮಾಡಿದೆ.
ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.