ಹುಬ್ಬಳ್ಳಿ, ಜು 05(DaijiworldNews/MS): ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಹುಬ್ಬಳಿಯ ಖಾಸಗಿ ಹೊಟೇಲ್ ನ ರಿಸೆಪ್ಷನ್ ನಲ್ಲಿ ಈ ಘಟನೆ ನಡೆದಿದ್ದು, ಭಕ್ತರ ಸೋಗಿನಲ್ಲಿ ಬಂದವರು ಈ ದುಷ್ಕೃತ್ಯ ನಡೆಸಿದ್ದಾರೆ.
ಚಾಕು ಇರಿತಕ್ಕೆ ಒಳಗಾಗಿ ಚಂದ್ರಶೇಖರ್ ಗುರೂಜಿ ಸಾವನ್ನಪ್ಪಿದ್ದಾರೆ. ಚಂದ್ರಶೇಖರ್ ಗುರೂಜಿಯ ಮೃತದೇಹ ಕಿಮ್ಸ್ ಗೆ ರವಾನೆ ಮಾಡಲಾಗಿದೆ
ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮೀಷನರ್ ಲಾಬೂರಾಮ್ ಆಗಮಿಸಿದ್ದು, ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಇವರ ಹತ್ಯೆ ಮಾಡಲಾಗಿದೆ ಎನ್ನುವುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಚಂದ್ರಶೇಖರ್ ಗುರೂಜಿ, ಸರಳ ಜೀವನ, ಸರಳ ವಾಸ್ತು, ಸರಳ ಅಕಾಡೆಮಿ, ಮನೆಗಾಗಿ ವಾಸ್ತು, ವಾಸ್ತು ಪರಿಹಾರದ ಮೂಲಕ ಅವರು ಕರ್ನಾಟಕದಲ್ಲಿ ಪ್ರಸಿದ್ದಿ ಹೊಂದಿದ್ದರು.