ನವದೆಹಲಿ, ಜು 05 (DaijiworldNews/HR): ಕೇಂದ್ರ ಚುನಾವಣಾ ಆಯೋಗವು ಉಪರಾಷ್ಟ್ರಪತಿಗಳ ಆಯ್ಕೆಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಆಗಸ್ಟ್ 6 ರಂದು ಮತದಾನ ನಡೆದು ಅಂದೇ ಮತಏಣಿಕೆ ಕಾರ್ಯನಡೆಯಲಿದೆ.
ಪ್ರಸ್ತುತ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ರಂದು ಕೊನೆಗೊಳ್ಳಲಿದ್ದು, ದೇಶದಲ್ಲಿ ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.
ಇನ್ನು ಆಗಸ್ಟ್ 6 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಉಪರಾಷ್ಟ್ರಪತಿಗಳ ಆಯ್ಕೆ ಪ್ರಕ್ರಿಗೆ ಮತದಾನ ನಡೆಯಲಿದ್ದು, ಅದೇ ದಿನ ಚುನಾವಣಾ ಫಲಿತಾಂಶವೂ ಪ್ರಕಟವಾಗಲಿದೆ.