ನವದೆಹಲಿ, ಜು 06 (DaijiworldNews/MS): ದೆಹಲಿ ಜನತೆಗೆ ಇಂದು ಮತ್ತೊಂದು ಬಿಗ್ ರಿಲೀಫ್ ಸಿಗಲಿದೆ ಅಥವಾ ಏನಾಗಲಿದೆ ಎಂಬುವುದರ ಬಗ್ಗೆ ಇಂದು ಮಧ್ಯಾಹ್ನ 12 ಗಂಟೆಗೆ ಬಹಿರಂಗವಾಗಲಿದೆ. ಯಾಕೆಂದರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ದೆಹಲಿಯ ಜನರಿಗೆ ದೊಡ್ಡ ಮತ್ತು ಮಹತ್ವದ ಘೋಷಣೆಯನ್ನು ಮಾಡಲಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್ನಿಂದ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಮ್ಮ ಟ್ವೀಟ್ನಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ನಾನು ದೆಹಲಿಯ ಜನರಿಗೆ ಬಹು ದೊಡ್ಡ ಮತ್ತು ಮಹತ್ವದ ಘೋಷಣೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಘೋಷಣೆಯು ಯಾವ ವಿಷಯಕ್ಕೆ ಸಂಬಂಧಿಸಿದೆ ಎಂಬುದರ ಕುರಿತು ಅವರು ಟ್ವೀಟ್ನಲ್ಲಿ ಯಾವುದೇ ಸುಳಿವು ನೀಡಿಲ್ಲ.
ಇನ್ನು ಮಂಗಳವಾರ ದೆಹಲಿ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯನ್ನು ಬಲ ಮತ್ತು ಗೂಂಡಾಗಿರಿಯ ಮೂಲಕ ನಡೆಸಲು ಬಿಡುತ್ತಿಲ್ಲ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದರು. ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸುವಂತೆ ಆಮ್ ಆದ್ಮಿ ಪಕ್ಷ ನ್ಯಾಯಾಲಯದ ಮೊರೆ ಹೋಗಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದರು.