ಬೆಂಗಳೂರು, ಜು 06 (DaijiworldNews/DB): ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ಅವರ ಹೇಳಿಕೆಯ ವೀಡಿಯೋವನ್ನು ಟ್ವಿಟರ್ನಲ್ಲಿ ಶೇರ್ ಮಾಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ದ ಕ್ರಮಕ್ಕೆ ಆಗ್ರಹಿಸಿ ನಾಗರಿಕರೊಬ್ಬರು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಗೆ ದೂರು ನೀಡಿದ್ದಾರೆ.
ಗಿರೀಶ್ ಭಾರದ್ವಾಜ್ ಎಂಬುವವರು ದೂರು ನೀಡಿದವರು. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ಅವರ ಹೇಳಿಕೆಯ ವೀಡಿಯೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವುದು ನ್ಯಾಯಾಂಗ ನಿಂದನೆಯಾಗಲಿದೆ. ಹೀಗಾಗಿ ರಾಹುಲ್ ಗಾಂಧಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.
ಎಸಿಬಿ ಅಧಿಕಾರಿಗಳ ಬಗ್ಗೆ ಮಾತನಾಡಿದ್ದಕ್ಕೆ ತನಗೆ ವರ್ಗಾವಣೆ ಬೆದರಿಕೆ ಬಂದಿದೆ ಎಂಬುದಾಗಿ ನ್ಯಾಯಮೂರ್ತಿ ಸಂದೇಶ್ ಅವರು ಕೋರ್ಟ್ ಕಲಾಪದ ವೇಳೆ ಹೇಳಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ನ್ಯಾಯಮೂರ್ತಿಗಳ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತವಾಗಿತ್ತು.