ನವದೆಹಲಿ, ಜು 07 (DaijiworldNews/MS): ಆರ್ಜೆಡಿ ಪಕ್ಷದ ಅಧ್ಯಕ್ಷ ಮತ್ತು ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರನ್ನು ಪಾಟ್ನಾ ಆಸ್ಪತ್ರೆಯಿಂದ ವಿಮಾನದ ಮೂಲಕ ಬುಧವಾರ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಿಲಾಗಿದೆ.
ಸೋಮವಾರ ಲಾಲು ಪ್ರಸಾದ್ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದರು. ಹೀಗಾಗಿ ಅವರ ಭುಜದ ಮೂಳೆ ಮುರಿದಿದ್ದು, ದೇಹದ ಮತ್ತೆರಡು ಕಡೆಗಳಲ್ಲಿ ಗಾಯಗಳಾಗಿವೆ. ಹೀಗಾಗಿ ಅವರಿಗೆ ನಡೆದಾಡಲು ಸಾಧ್ಯವಾಗುತ್ತಿಲ್ಲ. ಪಾಟ್ನಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಲಾಲು ಅವರನ್ನು ನಿನ್ನೆ ರಾತ್ರಿ 9.35 ರ ಸುಮಾರಿಗೆ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಗೆ ದಾಖಲಿಸಲಾಯಿತು ಎಂದು ಮೂಲಗಳು ತಿಳಿಸಿವೆ.ಲಾಲು ಅವರ ಜತೆ ವೈದ್ಯರ ತಂಡ ಮತ್ತು ಹಿರಿಯ ಪುತ್ರಿ ಮಿಸಾ ಭಾರ್ತಿ ಕೂಡ ದೆಹಲಿಗೆ ತೆರಳಿದ್ದಾರೆ.
ಬುಧವಾರ ರಾತ್ರಿ ದೆಹಲಿ ತಲುಪಿರುವ ಲಾಲು ಪ್ರಸಾದ್ ಅವರ ಪತ್ನಿ ಮತ್ತು ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರು, ಲಾಲು ಅವರ ಆರೋಗ್ಯ ಈಗ ಸ್ವಲ್ಪ ಸುಧಾರಿಸಿದೆ ಯಾರು ಚಿಂತಿಸಬೇಕಾಗಿಲ್ಲ, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.