ತುಮಕೂರು, ಜು 07 (DaijiworldNews/DB): ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರಿನ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಿಪಟೂರು ತಾಲೂಕಿನ ಮತ್ತಿಹಳ್ಳಿ ಬಳಿ ನಡೆದಿದೆ.
ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಎಸ್ಸಾರ್ಟಿಸಿ ಬಸ್ ಶಿವಮೊಗ್ಗ ಕಡೆಯಿಂದ ಬರುತ್ತಿತ್ತು. ಕಾರು ತುಮಕೂರಿನಿಂದ ಅರಸೀಕೆರೆಗೆ ಸಂಚರಿಸುತ್ತಿತ್ತು ಎಂದು ತಿಳಿದು ಬಂದಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.