ಕೋಲ್ಕತ್ತಾ, ಜು 07 (DaijiworldNews/HR): ಕೋಲ್ಕತ್ತಾದಿಂದ ಸುಮಾರು 50 ಕಿಮೀ ದೂರದಲ್ಲಿರುವ ಕ್ಯಾನಿಂಗ್ನ ಜನನಿಬಿಡ ಪ್ರದೇಶದಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಇಬ್ಬರು ಕಾರ್ಯಕರ್ತರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಪಶ್ಚಿಮ ಬಂಗಾಳದ ಗೋಪಾಲ್ಪುರ ಗ್ರಾಮ ಪಂಚಾಯತ್ ಸದಸ್ಯ ಸ್ವಪನ್ ಮಾಝಿ ಅವರು ಸಭೆಗೆ ತೆರಳುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆಸಿ ಚಾಕುವಿನಿಂದ ಹಲ್ಲೆ ನಡೆಸಿದ್ದು, ಅವರ ಜೊತೆ ಇದ್ದ ಇಬ್ಬರು ಕಾರ್ಯಕರ್ತರ ಮೇಲೂ ಗುಂಡು ಹಾರಿಸಿದ್ದಾರೆ.
ಇನ್ನು ಜನನಿಬಿಡ ರಸ್ತೆಯಲ್ಲಿ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು, ಮೊದಲು ಮಾಝಿಗೆ ಗುಂಡು ಹಾರಿಸಿದ್ದು, ಆತನಿಗೆ ಗುಂಡು ಹಾರಿಸಿರುವುದನ್ನು ನೋಡಿದ ಇತರ ಇಬ್ಬರು ಓಡಿಹೋಗಲು ಪ್ರಾರಂಭಿಸಿದಾಗ ದಾಳಿಕೋರರು ಹಿಂಬದಿಯಿಂದ ಅವರ ಮೇಲೂ ಗುಂಡು ಹಾರಿಸಿದ್ದಾರೆ.