ಚಿಕ್ಕಬಳ್ಳಾಪುರ, ಜು 08 (DaijiworldNews/HR): ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಂದಿಗೆ ಪ್ರೀತಿಗೆ ಬಿದ್ದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ.
ಬಿ.ಎಸ್ಸಿ ಅಗ್ರೀಕಲ್ಚರ್ ಓದುತ್ತಿದ್ದ ಪವಿತ್ರಾಗೆ ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನ ಪ್ರೀತಿಯ ಬಲೆಗೆ ಬಿದ್ದು ಕಾಲೇಜಿನ ವಸತಿ ನಿಲಯದಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.
ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಮೊಬೈಲ್ನಲ್ಲಿ ವಿಡಿಯೋ ಮಾಡಿಟ್ಟು ಭಗ್ನಪ್ರೇಮದ ಕುರಿತು ಮಾಹಿತಿ ನೀಡಿದ್ದಾಳೆ. ಜತೆಗೆ ಡೆತ್ನೋಟ್ ಕೂಡ ಬರೆದಿಟ್ಟಿದ್ದಾಳೆ.
ಇನ್ನು ಇನ್ಟಾಗ್ರಾಂ ನಲ್ಲಿ ಪರಿಚಯವಾದ ಹುಡಗನ ಜೊತೆ ಲವ್ ಮಾಡಿದ್ದು, ಈಗ ಲವ್ ಫೇಲ್ಯೂರ್ ಆಗಿರುವ ಹಿನ್ನೆಲೆಯಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮೊಬೈಲ್ನಲ್ಲಿ ವಿಡಿಯೋ ಮಾಡಿಟ್ಟಿದ್ದಾಳೆ.
ಈ ಬಗ್ಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ.