ನವದೆಹಲಿ, ಜು 08 (DaijiworldNews/MS): ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಜುಬೈರ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಪೋಸ್ಟ್ಗಳನ್ನು ಮಾಡಿದ ಆರೋಪದಡಿ ಜುಬೈರ್ ಬಂಧನಕ್ಕೆ ಒಳಗಾಗಿದ್ದರು
2018ರಲ್ಲಿ ಹಿಂದೂ ವಿಗ್ರಹ ಕುರಿತು ಜುಬೇರ್ ವಿವಾದಾತ್ಮಕ ಟ್ವೀಟ್ ಮಾಡಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜುಬೈರ್ ವಿರುದ್ಧ ಹಿಂದೂ ಶೇರ್ ಸೇನಾದ ಸಿತಾಪುರ ಜಿಲ್ಲಾಧ್ಯಕ್ಷ ಭಗವಾನ್ ಶರಣ್ ದೂರು ನೀಡಿದ್ದು, ಉತ್ತರಪ್ರದೇಶದಲ್ಲಿ ಪ್ರಕರಣ ದಾಖಲಾಗಿತ್ತು. ಜೂನ್ 27ರಂದು ದೆಹಲಿ ಪೊಲೀಸರು ಜುಬೈರ್ ಅವರನ್ನು ಬಂಧಿಸಿದ್ದರು.