ಬೆಂಗಳೂರು, ಜು 08 (DaijiworldNews/DB): ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯ ಮಟ್ಟದ ವಾರ್ ರೂಮ್ ತಂಡವನ್ನು ರಚಿಸಿದ್ದು, ತಂಡದ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ನೇಮಕ ಮಾಡಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ಈ ನೇಮಕ ಆದೇಶ ಹೊರಡಿಸಿದೆ. ಸುನೀಲ್ ಕಣುಗೌಳಿ ಒಟ್ಟು ಉಸ್ತುವಾರಿಯನ್ನು ನೋಡಿಕೊಳ್ಳಲಿದ್ದಾರೆ. ರಾಜ್ಯ ಕಾಂಗ್ರೆಸ್ ಘಟಕದ ಉಪಾಧ್ಯಕ್ಷರಾಗಿ ಸೂರಜ್ ಹೆಗ್ಡೆ ಅವರನ್ನು ನೇಮಿಸಲಾಗಿದೆ.
ಕರ್ನಾಟಕ ಕೇಡರ್ನ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರು. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ವೇಳೆ 2019ರ ಸೆಪ್ಟೆಂಬರ್ನಲ್ಲಿ ತಮ್ಮ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿ ಹೊರ ಬಂದಿದ್ದರು. ಬಳಿಕ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದರು.