ನವದೆಹಲಿ, ಜು 08 (DaijiworldNews/HR): ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಬಣ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿರುವ ಏಕನಾಥ್ ಶಿಂಧೆ ಅವರ ನೇಮಕವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜುಲೈ 11 ರಂದು ನಡೆಸಲು ಸುಪ್ರೀಂಕೋರ್ಟ್ ಸಮ್ಮತಿ ನೀಡಿದೆ.
ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಜೆಕೆ ಮಹೇಶ್ವರಿ ಅವರಿದ್ದ ವಿಭಾಗೀಯ ಪೀಠ ಜುಲೈ 11ಕ್ಕೆ ಪ್ರಕರಣವನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ಇನ್ನು ಜೂನ್ 30 ರಂದು ಶಿಂಧೆ ಬಣಕ್ಕೆ ಬಿಜೆಪಿ ಸರ್ಕಾರ ರಚಿಸಲು ಆಹ್ವಾನಿಸಿದ ರಾಜ್ಯಪಾಲರ ನಿರ್ಧಾರವನ್ನು ಕೋರ್ಟ್ನಲ್ಲಿ ಪ್ರಶ್ನಿಸಿದ್ದು, ಜೊತೆಗೆ ಹೊಸ ಸ್ಪೀಕರ್ ಆಯ್ಕೆ ಸೇರಿದಂತೆ ಜುಲೈ 3 ಮತ್ತು 4 ರಂದು ನಡೆದ ವಿಧಾನಸಭಾ ಪ್ರಕ್ರಿಯೆಗಳನ್ನು ಕೂಡ ಉದ್ಧವ್ ಠಾಕ್ರೆ ಬಣ ಪ್ರಶ್ನಿಸಿದೆ.