ಬೆಂಗಳೂರು,ಜು 08 (DaijiworldNews/SM): ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಹಾ ಮಳೆಯಾಗುತ್ತಿದೆ. ಭಾರೀ ಮಳೆಯ ಪರಿಣಾಮದಿಂದಾಗಿ ರಾಜ್ಯದಲ್ಲಿ ಇಲ್ಲಿಯ ತನಕ 12 ಮಂದಿ ಬಲಿಯಾಗಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಶುಕ್ರವಾರದಂದು ಜಿಲ್ಲಾಧಿಕಾರಿಗಳ ಜೊತೆ ಸಂವಾದ ನಡೆಸಿದ ಅವರು, ಈ ಮಾಹಿತಿಯನ್ನು ನೀಡಿದ್ದಾರೆ. ರಾಜ್ಯದ ೧೩ ಜಿಲ್ಲೆಗಳಲ್ಲಿ ತೀವ್ರ ಪ್ರವಾಹ ಬಂದಿದೆ. ೬೫ ಜಾನುವಾರುಗಳ ಜೀವಹಾನಿ ಆಗಿದೆ. ಮುಂದಿನ 3 ದಿನ ವ್ಯಾಪಕ ಮಳೆ ಆಗಲಿದೆ ಎಂದು ಇಲಾಖೆ ವರದಿ ನೀಡಿದೆ ಎಂಬುವುದಾಗಿ ಸಿಎಂ ಹವಾಮಾನ ಇಲಾಖೆಯ ವರದಿಯನ್ನು ಉಲ್ಲೇಖಿಸಿದ್ದಾರೆ.
ಇಂದು ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸಿಎಂ ವೀಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.