ನವದೆಹಲಿ, ಜು 09 (DaijiworldNews/MS): ಚಿತ್ರಮಂದಿರದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಶ್ಚಿಮ ದೆಹಲಿಯ ವಿಕಾಸಪುರಿಯ ಪಿವಿಆರ್ ಟಾಕೀಸ್ ನಲ್ಲಿ ಶುಕ್ರವಾರ ನಡೆದಿದೆ.
ಪಿವಿಆರ್ ವಾಶ್ ರೂಂನಲ್ಲಿ ಶವ ಪತ್ತೆಯಾಗಿದ್ದು, ಬಳಿಕ ಪೊಲೀಸರು ಅದನ್ನು ವಶಪಡಿಸಿಕೊಂಡಿದ್ದಾರೆ.
ವ್ಯಕ್ತಿಯ ಜೇಬಿನಲ್ಲಿ ಆಧಾರ್ ಕಾರ್ಡ್ ಪತ್ತೆಯಾಗಿದ್ದು, ಅದರ ಆಧಾರದ ಮೇಲೆ ಆತನನ್ನು ಗುರುತಿಸಲಾಗಿದೆ. ಅವರ ವಯಸ್ಸು ಸುಮಾರು 44 ವರ್ಷ ಎಂದು ವರದಿಯಾಗಿದೆ.
ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಪೊಲೀಸರು ಪ್ರಕರಣದ ಮುಂದಿನ ತನಿಖೆ ನಡೆಸುತ್ತಿದ್ದಾರೆ.
ವ್ಯಕ್ತಿ ತನ್ನ ಮೇಲೆ ಹರಿತವಾದ ವಸ್ತುವಿನಿಂದ ಗಾಯ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ