ಕೊಡಗು, ಜು 09 (DaijiworldNews/HR): ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಭಾರೀ ವಾಹನಗಳ ಸಂಚಾರವನ್ನು ಇಂದಿನಿಂದ ಅಕ್ಟೋಬರ್.15 ರವರೆಗೆ ನಿಷೇಧಿಸಲಾಗಿದೆ.
ಜಿಲ್ಲಾಧಿಕಾರಿ ಬಿ.ಸಿ ಸತೀಶ ಅವರು ಆದೇಶ ಹೊರಡಿಸಿದ್ದು, ಎಲ್ಲಾ ರೀತಿಯ ಮರದ ದಿಮ್ಮಿ, ಮರಳು ಸಾಗಿಸುವ ವಾಹನಗಳಿಗೆ ಇಂದಿನಿಂದ ಅಕ್ಟೋಬರ್ 15 ರವರೆಗೆ ನಿರ್ಬಂಧ ಹೇರಲಾಗಿದೆ. 16,200 ಕೆ.ಜಿ ಗಿಂತ ಹೆಚ್ಚಿನ ತೂಕದ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.
ಇನ್ನು ಅಡುಗೆ ಅನಿಲ, ಇಂಧನ ಪೂರೈಕೆ, ಹಾಲು ಪೂರೈಕೆ, ಸರ್ಕಾರಿ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಡಿಸಿ ಆದೇಶ ಹೊರಡಿಸಿದ್ದಾರೆ.