ಹಾಸನ, ಜು 09 (DaijiworldNews/HR): ಬಸ್ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದಂತ ಬಸ್ ಉರುಳಿ ಬಿದ್ದು, 10ಕ್ಕೂ ಅಧಿಕ ಮಕ್ಕಳು ಗಾಯಗೊಂಡಿರುವ ಘಟನೆ ಹಾಸನದ ಉಗನೆ ಗ್ರಾಮದಲ್ಲಿ ನಡೆದಿದೆ.
ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿದ್ದು, ಈ ಹಿನ್ನಲೆಯಲ್ಲಿ ಬಸ್ ನಲ್ಲಿದ್ದಂತ 25 ಮಕ್ಕಳಲ್ಲಿ 10ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಗಾಯಗೊಂಡ ಮಕ್ಕಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಶಾಲಾ ಬಸ್ ಪಲ್ಟಿಗೆ ರಸ್ತೆ ಅವ್ಯವಸ್ಥೆಯೇ ಕಾರಣ ಎನ್ನಲಾಗಿದೆ.