ಬೆಂಗಳೂರು, ಜು 09 (DaijiworldNews/HR): ಬಾಣಸವಾಡಿ ಪೊಲೀಸರು ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಮಹಿಳೆಯರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಆಫ್ರಿಕಾ ಮೂಲದ ನಮ್ಯುಟೆಬಿ ಶಮ್ರಿಯಾ ಮತ್ತು ನನ್ಫುಕಾ ಫಿಯೊನ ಎಂದು ಗುರುತಿಸಲಾಗಿದೆ.
ಪೊಲೀಸರು ಬಂಧಿತರಿಂದ 1.5 ಲಕ್ಷ ಮೌಲ್ಯದ ಮಾದಕ ವಸ್ತು 2 ಮೊಬೈಲ್ ಗಳನ್ನು ಜಪ್ತಿ ಮಾಡಿದ್ದಾರೆ.
ಇನ್ನು 2020ರಲ್ಲಿ ಟೂರಿಸ್ಟ್ ವಿಸಾದಡಿ ಬಂದಿದ್ದ ಎ1 ಆರೋಪಿ. 2021ರಲ್ಲಿ ಮೆಡಿಕಲ್ ವೀಸಾದಡಿ ಬಂದಿದ್ದ ಎ2 ಆರೋಪಿ. ವೀಸಾ ಅವಧಿ ಮುಗಿದರೂ ಅಕ್ರಮವಾಗಿ ಭಾರತದಲ್ಲಿ ವಾಸಿಸ್ತಿದ್ದರು ಎನ್ನಲಾಗಿದೆ.
ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.