ನವದೆಹಲಿ, ಜು 09 (DaijiworldNews/HR): ಅಮರನಾಥದಲ್ಲಿ ಮೇಘಸ್ಫೋಟ ಸಂಭವಿಸಿದ ಬೆನ್ನಲ್ಲೇ ಇದೀಗ ಕೇದರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಸೋನಪ್ರಯಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ರುದ್ರಪ್ರಯಾಗ ಜಿಲ್ಲಾಡಳಿತ ತಿಳಿಸಿದೆ.
ಇನ್ನು ಅಮರನಾಥ ಗುಹಾ ದೇಗುಲದ ಬಳಿ ಸಂಭವಿಸಿದ ಮೇಘಾಸ್ಫೋಟದಿಂದಾಗಿ 16 ಮಂದಿ ಮೃತಪಟ್ಟಿದ್ದು, 15 ಸಾವಿರಕ್ಕೂ ಅಧಿಕ ಯಾತ್ರಿಕರನ್ನು ಸುರಕ್ಷಿತ ಸ್ಥಳದಲ್ಲಿ ಇರಿಸಲಾಗಿದೆ.