ಹೊಸದಿಲ್ಲಿ, ಜು 10 (DaijiworldNews/DB): ತನ್ನ ಹುಟ್ಟುಹಬ್ಬ ಆಚರಣೆಗಾಗಿ ಭಾರೀ ಸಂಖ್ಯೆಯಲ್ಲಿ ಮೆಟ್ರೋ ನಿಲ್ದಾಣದಲ್ಲಿ ಜಮಾಯಿಸಲು ಅಭಿಮಾನಿಗಳಿಗೆ ಕರೆ ನೀಡಿ ಸೆಕ್ಷನ್ 144ನ್ನು ಉಲ್ಲಂಘಿಸಿದ್ದಕ್ಕೆ ಯೂಟ್ಯೂಬರ್ ಗೌರವ್ ತನೇಜಾ ಅವರನ್ನು ಉತ್ತರ ಪ್ರದೇಶದ ನೋಯ್ಡಾದಲ್ಲಿ ಭಾನುವಾರ ಬಂಧಿಸಲಾಗಿದೆ.
'ಫ್ಲೈಯಿಂಗ್ ಬೀಸ್ಟ್' ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ತನೇಜಾ ನೋಯ್ಡಾದ ಸೆಕ್ಟರ್ 51 ಮೆಟ್ರೋ ನಿಲ್ದಾಣದಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಯೋಜಿಸಲು ಅಭಿಮಾನಿಗಳಿಗೆ ಹೇಳಿದ್ದರು. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಂ ಪುಟದಲ್ಲಿ ನಿನ್ನೆ ಪೋಸ್ಟ್ ಮಾಡಿದ್ದರು. ಹೀಗಾಗಿ ನಿಲ್ದಾಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದರು. ಇದರಿಂದ ಕಾಲ್ತುಳಿತ ಉಂಟಾಗಿತ್ತು. ಹೀಗಾಗಿ ಹುಟ್ಟುಹಬ್ಬ ಆಚರಣೆಯ ದಿನದಂದೇ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಗೌರವ್ ತನೇಜಾ ಅವರು ಇನ್ ಸ್ಟಾಗ್ರಾಮ್ ನಲ್ಲಿ 3.3 ಮಿಲಿಯನ್ ಗೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. ಅವರ ಪತ್ನಿ ರಿತು ರಾಥೀ ಅವರು 1.6 ಮಿಲಿಯನ್ಗಿಂತಲೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. ಪತ್ನಿ ಇಡೀ ಮೆಟ್ರೋವನ್ನೇ ಪತಿಯ ಹುಟ್ಟುಹಬ್ಬಕ್ಕಾಗಿ ಬುಕ್ ಮಾಡಿದ್ದರು.