ನವದೆಹಲಿ, ಜು 10 (DaijiworldNews/HR): ಇಬ್ಬರು ಪೊಲೀಸ್ ಅಧಿಕಾರಿಗಳು ಮಹಾರಾಷ್ಟ್ರದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಪಾರು ಮಾಡಲು ಪ್ರವಾಹದಲ್ಲಿ ಧುಮುಕಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ವಿಡೀಯೋವನ್ನು ಎನ್ಸಿಪಿ ನಾಯಕಿ ಹಾಗೂ ಸಂಸದೆ ಸುಪ್ರಿಯಾ ಸುಳೆ ಟ್ವೀಟರ್ ನಲ್ಲಿ ಶೇರ್ ಮಾಡಿದ್ದು, ತಮ್ಮ ಜೀವಕ್ಕೆ ಅಪಾಯವಿದ್ದರೂ ಲೆಕ್ಕಿಸದೇ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಲು ಇಬ್ಬರು ಅಧಿಕಾರಿಗಳು ತೋರಿದ ಸಾಹಸ ಶ್ಲಾಘನೀಯ. ಮಹಾರಾಷ್ಟ್ರ ಪೊಲೀಸರ ಬಗ್ಗೆ ನಮಗೆ ಹೆಮ್ಮೆ ಎನಿಸುತ್ತದೆ ಎಂದು ಬರೆದುಕೊಂಡಿದ್ದಾರೆ.
ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಈ ಇಬ್ಬರು ಅಧಿಕಾರಿಗಳ ಸಾಹಸವನ್ನು ಸಾವಿರಾರು ಮಂದಿ ಶ್ಲಾಘಿಸಿದ್ದು, ಈ ವಿಡಿಯೋ ವೈರಲ್ ಆಗಿದೆ.