ಮೂಡಿಗೆರೆ, ಜು 10 (DaijiworldNews/HR): ನಿರಂತರ ಸುರಿಯುತ್ತಿರುವ ಗಾಳಿ ಮಳೆಯಿಂದಾಗಿ ಚಾರ್ಮಾಡಿ ಘಾಟ್ ನ ಎಂಟನೇ ತಿರುವಿನಲ್ಲಿ ಭಾನುವಾರ ಬೃಹತ್ ಗಾತ್ರದ ಮರ ಬಿದ್ದಿದೆ.
ಮರವು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡು, ವಾಹನ ಸಂಚಾರರು ಪರದಾಡುವಂತಾಗಿತ್ತು.
ಇನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಅರಣ್ಯ ಇಲಾಖೆಯಿಂದ ತೆರವು ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು.