ನವದೆಹಲಿ, ಜು 11(DaijiworldNews/MS): ಶ್ರೀಲಂಕಾದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟು ಬಗೆಹರಿಸುವಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ದ ಸಿಡಿದೆದ್ದಿರುವ ಪ್ರತಿಭಟನಕಾರರು, ಅಧ್ಯಕ್ಷ ಹಾಗೂ ಪ್ರಧಾನಿ ನಿವಾಸಕ್ಕೆ ನುಗ್ಗಿದ ಬಳಿಕ, ಕೊಲಂಬೊಕ್ಕೆ ಭಾರತ ತನ್ನ ಸೇನೆಯನ್ನು ರವಾನಿಸಲಿದೆ ಎಂಬ ಊಹಾಪೋಹ ಮಾಧ್ಯಮ ವರದಿಗಳನ್ನು ಶ್ರೀಲಂಕಾದಲ್ಲಿರುವ ಭಾರತೀಯ ಹೈಕಮಿಷನ್ ಭಾನುವಾರ ತಳ್ಳಿಹಾಕಿದೆ.
"ಭಾರತವು ತನ್ನ ಸೈನ್ಯವನ್ನು ಶ್ರೀಲಂಕಾಕ್ಕೆ ಕಳುಹಿಸುವ ಕುರಿತು ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಊಹಾಪೋಹದ ವರದಿಗಳನ್ನು ಹೈಕಮಿಷನ್ ಸ್ಪಷ್ಟವಾಗಿ ನಿರಾಕರಿಸಲು ಬಯಸುತ್ತದೆ. ಈ ವರದಿಗಳು ಮತ್ತು ಅಂತಹ ಅಭಿಪ್ರಾಯಗಳು ಭಾರತ ಸರ್ಕಾರದಕ್ಕೆ ಹೊಂದಿಕೆಯಾಗುವುದಿಲ್ಲ" ಎಂದು ಭಾರತೀಯ ಹೈಕಮಿಷನ್ ಆಯೋಗವು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ ಹೇಳಿಕೆಯಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳು, ಮತ್ತು ಸಾಂವಿಧಾನಿಕ ಚೌಕಟ್ಟಿನ ಮೂಲಕ ಸಮೃದ್ಧಿ ಮತ್ತು ಪ್ರಗತಿಗಾಗಿ ಅವರ ಆಕಾಂಕ್ಷೆಗಳನ್ನು ಸಾಧಿಸಲು ಪ್ರಯತ್ನಿಸುತ್ತಿರುವ ಶ್ರೀಲಂಕಾದ ಜನರೊಂದಿಗೆ ಭಾರತ ನಿಂತಿದೆ ಹೇಳಿದ್ದಾರೆ
ಶ್ರೀಲಂಕಾ ಮತ್ತು ಅದರ ಜನರು ಎದುರಿಸುತ್ತಿರುವ ಅನೇಕ ಸವಾಲುಗಳ ಬಗ್ಗೆ ನಮಗೆ ತಿಳಿದಿದೆ ಮತ್ತು ಶ್ರೀಲಂಕಾದ ಜನರು ಈ ಕಷ್ಟದ ಅವಧಿಯನ್ನು ಜಯಿಸಲು ಪ್ರಯತ್ನಿಸುತ್ತಿರುವಾಗ ನಾವು ಅವರೊಂದಿಗೆ ನಿಂತಿದ್ದೇವೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಸ್ಪಷ್ಟವಾಗಿ ಹೇಳಿದೆ