ನವದೆಹಲಿ, ಜು 11 (DaijiworldNews/HR): ಹೈಕೋರ್ಟ್ ನ್ಯಾಯಮೂರ್ತಿ ಹೆಚ್ ಪಿ ಸಂದೇಶ್ ಅವರು ತಮ್ಮನ್ನೇ ವರ್ಗಾವಣೆ ಮಾಡೋದಾಗಿ ಬೆದರಿಕೆ ಹಾಕಲಾಗಿದ್ದು, ಇದನ್ನು ನಮ್ಮ ಸಹ ನ್ಯಾಯಮೂರ್ತಿಗಳು ಹೇಳಿದ್ದಾರೆ. ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ. ನಿಮ್ಮ ಎಸಿಬಿ ಎಡಿಜಿಪಿ ಅಷ್ಟು ಸ್ಟ್ರಾಂಗ್ ಇದೇಯಾ ಎಂದು ಹೇಳಿದ್ದಂತ ಹೇಳಿಕೆಯ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ತೆಗೆದು ಹಾಕುವಂತೆ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದಂತ ಮೇಲ್ಮನವಿಗೆ ಸುಪ್ರೀಂ ಕೋರ್ಟ್ ಸಿಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೈಕೋರ್ಟ್ ನ್ಯಾಯಮೂರ್ತಿ ಹೆಚ್ ಪಿ ಸಂದೇಶ್ ಅವರು ಎಸಿಪಿ ಎಡಿಜಿಪಿ ಬಗ್ಗೆ ಕೋರ್ಟ್ ಕಲಾಪದಲ್ಲಿ ಮಾತನಾಡಿದ್ದಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಇನ್ನು ಈ ವೀಡಿಯೋವನ್ನು ತೆಗೆದು ಹಾಕುವಂತೆ ಭ್ರಷ್ಟಾಚಾರ ನಿಗ್ರಹ ದಳದ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರನ್ನೊಳಗೊಂಡಂತ ನ್ಯಾಯಪೀಠವು ಇಂದು ಹೈಕೋರ್ಟ್ ನ್ಯಾಯಮೂರ್ತಿಯನ್ನೇ ವರ್ಗಾವಣೆ ಮಾಡೋ ಬೆದರಿಕೆ ಹಾಕೋ ಪ್ರಕರಣ ಏನಿದು ಎಂಬುದಾಗಿ ಸೀಮಂತ್ ಕುಮಾರ್ ಸಿಂಗ್ ಪರ ವಕೀಲರನ್ನು ಪ್ರಶ್ನಿಸಿದ್ದು, ಇದೆಲ್ಲವೂ ಮಾಧ್ಯಮಗಳಲ್ಲಿ ಬಂದಿದೆ. ಇದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.